Breaking News

ರಾಜ್ಯ ಬಜೆಟ್ ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿ

Spread the love

ಹುಬ್ಬಳ್ಳಿ (Hubballi): ರಾಜ್ಯ ಬಜೆಟ್ (State Budget) ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(dkshivakumar) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ.

ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕಳೆದ 8 ತಿಂಗಳುಗಳಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಲು ಕ್ರಮ ಕೈಗೊಂಡಿದ್ದೇವೆ ಎಂದರು.‌


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ