Breaking News

2024: ಪುಸ್ತಕದಲ್ಲಿ ಬರೆದಿದ್ದನ್ನು ಓದುವ ಕೆಲಸ ಸಿಎಂ ಮಾಡಿದ್ದಾರೆ: ಯತ್ನಾಳ್‌

Spread the love

ಬೆಂಗಳೂರು: ಪುಸ್ತಕದಲ್ಲಿ ಬರೆದಿದ್ದನ್ನು ಓದುವ ಕೆಲಸ ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಭಾಗಕ್ಕೆ ಪ್ರಯೋಜನ ಒದಗಿಸದ ಬೋಗಸ್ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಮಾಡಿದ ಭಾಷಣದಲ್ಲಿ ಅವರು ಕೇಂದ್ರ ಸರ್ಕಾರ (Union Government) ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುವುದು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಯಾವುದೇ ಹೊಸ ಯೋಜನೆ ಘೋಷಿಸುವುದು ಅವರಿಗೆ ಸಾಧ್ಯವಾಗಿಲ್ಲ, ಬೊಕ್ಕಸದಲ್ಲಿ ಹಣವೇ ಇಲ್ಲದಾಗ ಹೊಸ ಯೋಜನಗಳ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳೋದು ಹುಚ್ಚತನ ಎಂದರು.

ಬಜೆಟ್ ಅತ್ಯಂತ ನಿರಾಶಾದಾಯಕ: ಸುಧಾಕರ್
ಅದೇ ರೀತಿ ಮಾಜಿ ಸಚಿವ ಡಾ. ಸುಧಾಕರ್ ಮಾತನಾಡಿ, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಅದರಲ್ಲೂ ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ (Chikkaballapur), ಕೋಲಾರ (Kolar) ಹಾಗೂ ಬೆಂಗಳೂರು ಗ್ರಾಮಾಂತರ (Bengaliru Rural) ಜಿಲ್ಲೆಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ, ಈ ಭಾಗದ ಜನರ ಎಲ್ಲ ನಿರೀಕ್ಷೆಗಳೂ ಹುಸಿಯಾಗಿವೆ ಎಂದು ಹೇಳಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ