Breaking News

ರಾಯಚೂರು, ಮೈಸೂರು ಭಾಗದಲ್ಲಿ ನೂತನ ಜವಳಿ ಪಾರ್ಕ್‌ ಸ್ಥಾಪನೆ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ವಲಯದಲ್ಲಿ ಸುಮಾರು 88,150 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸಿದೆ.

Electro System Design and Manufacturing (ESDM), ಚಾಲಿತ ವಾಹನಗಳಿಗೆ ಲಿಥಿಯಂ ಅಯಾನ್ ಬ್ಯಾಟರಿ ತಯಾರಿ ತಯಾರಿಕಾ ವಲಯ, ಆಟೊಮೊಬೈಲ್, ಡೇಟಾ ಸೆಂಟರ್ ಮತ್ತಿತ ವಲಯಗಳಲ್ಲಿ ಈ ಹೂಡಿಕೆಗಳನ್ನು ಮಾಡಲಾಗುತ್ತಿದೆ.

 

ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದು, ಯೋಜನೆಯಿಂದ ಅಂದಾಜು 40,000 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದ್ದು, `ಸುಮಾರು 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೈಗಾರಿಕಾ ಅಭಿವೃದ್ಧಿಯಲ್ಲಿ ಕರ್ನಾಟಕದ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು.

ರಾಜ್ಯಕ್ಕೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಫೆಬ್ರವರಿ 2025ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು (Global Investor’s Meet) ಆಯೋಜಿಸಲಾಗುವುದು.

ಗ್ರಾಮೀಣ ಜನರಲ್ಲಿ ಆರ್ಥಿಕ ಶಿಸ್ತು ಮತ್ತು ಉಳಿತಾಯ ಮನೋಭಾವವನ್ನು ಉತ್ತೇಜಿಸಲು ಎಂ.ಎಸ್.ಐ.ಎಲ್. ವತಿಯಿಂದ ಚಿಟ್‌ಫಂಡ್ ಅನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಲಾಗುವುದು.

ಯಶವಂತಪುರದಲ್ಲಿ ಕೆ.ಎಸ್.ಡಿ.ಎಲ್ ವತಿಯಿಂದ ಜಮೀನಿನಲ್ಲಿ ವಿವಿಧ ಸರ್ಕಾರಿ ಇಲಾಖೆಗಳನ್ನು ನಿರ್ವಹಿಸಲು ಸುಸಜ್ಜಿತ ಕಛೇರಿ ಸಂಕೀರ್ಣವನ್ನು ನಿರ್ಮಿಸಲಾಗುವುದು.

ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಕೈಗಾರಿಕಾ ವಸಾಹತುಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ನಿಗಮದ (KSSIDC) ಮೂಲಕ ಮೇಲ್ದರ್ಜೆಗೇರಿಸಲಾಗುವುದು.

ಮಂಡ್ಯದ ಮೈಶುಗರ್ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗುವುದು. ಸರ್ಕಾರದ ಅನುದಾನ, ಇತರೆ Asset ಮೂಲಗಳು ಹಾಗೂ Monetisation ಮೂಲಕ ಕ್ರೋಢೀಕರಿಸಲಾಗುವುದು. ಕಾರ್ಖಾನೆಯ ಸಂಪನ್ಮೂಲವನ್ನು

ರಾಜ್ಯದಲ್ಲಿ ಜವಳಿ ಹಾಗೂ ನೇಕಾರಿಕೆ ಅಭಿವೃದ್ಧಿ, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಜಿಸಲು 2024-298 ಅವಧಿಗೆ 10.000 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ ಉದ್ಯೋಗಗಳ ಸೃಜನೆಯ ಗುರಿಯೊಂದಿಗೆ ಹೊಸ ಜವಳಿ ನೀತಿಯನ್ನು ಜಾರಿಗೊಳಿಸಲಾಗುವುದು.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಮತ್ತು ಮೈಸೂರು ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್‌ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು- ಇದರಿಂದ ಸುಮಾರು 10,000 ಉದ್ಯೋಗ ಸೃಷ್ಟಿಯಾಗಲಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ