Breaking News

ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಸುಳ್ಳಿನ ಕಂತೆಯ ರಾಜಕೀಯ ಬಜೆಟ್

Spread the love

ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡನೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ.

ಬಜೆಟ್​​ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್​​ಟಿ ಕೌನ್ಸಿಲ್ ಇದೆ. ನೀತಿ ಆಯೋಗ ಇದೆ. ಒಂದು ಬಾರಿಯೂ ನೀತಿ ಆಯೋಗದ ಸಭೆಗೆ ಹಾಜರಾಗದೇ ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್​​ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ