ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಐದು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನವರು ಟಿಕೆಟ್ ನೀಡಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದವರೇ ಬಹುಸಂಖ್ಯಾತರು.
ಅದಕ್ಕೆ ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದ ಇಬ್ಬರು, ಕಲ್ಯಾಣ ಕರ್ನಾಟಕದಲ್ಲಿ ಒಬ್ಬರಿಗೆ ಟಿಕೆಟ್ ಕೊಡಬೇಕು. ಮಲೆನಾಡಿನಲ್ಲಿ ಮಲೆಗೌಡ ಸಮುದಾಯಕ್ಕೆ ಮತ್ತು ಮೈಸೂರು ಭಾಗದಲ್ಲಿ ಲಿಂಗಾಯತ ಗೌಡ ಸಮುದಾಯಕ್ಕೆ ತಲಾ ಒಂದೊಂದು ಟಿಕೆಟ್ ನೀಡಬೇಕು’ ಎಂದರು.
‘ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮೊದಲಿನಿಂದಲೂ ನಮ್ಮ ಸಮುದಾಯದವರೇ ಗೆಲ್ಲುತ್ತಿದ್ದಾರೆ. ಅದಕ್ಕೆ ಎರಡೂ ರಾಷ್ಟ್ರೀಯ ಪಕ್ಷದವರು ಈ ಸಲವೂ ನಮ್ಮ ಸಮುದಾಯದವರಿಗೆ ಟಿಕೆಟ್ ಕೊಡಬೇಕು’ ಎಂದರು.