Breaking News

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

Spread the love

ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು.

ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೂರು ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಬಾಗಲಕೋಟೆಯ ಕಲಾದಗಿಯಲ್ಲಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿದಂತೆ ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದು ಅಲ್ಲದೆ ಅವರ ಕಾರಿಗೆ ಚಪ್ಪಲಿ ಎಸೆದಿರುವ ಘಟನೆ ನಡೆದಿದೆ. ಉದಗಟ್ಟಿ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶ್ರೀಗಳ ಕಾರನ್ನು ಅಡಗಟ್ಟಿದ್ದ ಭಕ್ತರು, ವಿವಾದ ಕೋರ್ಟ್‌ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ ಅವರಿಂದ ಮಠದ ದುರಸ್ತಿ, ಹೊಲದ ಉಳುಮೆ ಮಾಡಿದ್ದಕ್ಕೆ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ತಳ್ಳಾಟ, ನೂಕಾಟ ನಡೆದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು. ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಅವರ ಉತ್ತರಾಧಿಕಾರಿಯನ್ನಾಗಿ ರಂಭಾಪುರಿ ಶ್ರೀಗಳು ಮಧ್ಯಸ್ಥಿಕೆ ವಹಿಸಿ ತಮ್ಮದೇ ಪೀಠದ ಶಿಷ್ಯರಾಗಿರುವ ಕೆ.ಎಂ​.ಗಂಗಾಧರ ಸ್ವಾಮೀಜಿಯನ್ನು ನೇಮಕ ಮಾಡಿದ್ದರು. ಗ್ರಾಮಸ್ಥರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಮಾಡದೇ ಏಕಪಕ್ಷೀಯವಾಗಿ ರಂಭಾಪುರಿ ಶ್ರೀಗಳು ನಿರ್ಧಾರ ತೆಗೆದುಕೊಂಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ