Breaking News

ಕೃಷಿ ಪರಿಕರಗಳನ್ನ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತು

Spread the love

ಕಲಬುರಗಿ, ಫೆ.18: ಕೃಷಿ ಪರಿಕರಗಳನ್ನು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನುಅಮಾನತುಮಾಡಿ ಕಲಬುರಗಿ(Kalaburagi) ಜಂಟಿ ಕೃಷಿ ನಿರ್ದೇಶಕರು ಆದೇಶಿಸಿದ್ದಾರೆ. ಇದೇ ಫೆಬ್ರವರಿ 5 ರಂದು ಟ್ಯ್ಯಾಕ್ಟರ್‌ನಲ್ಲಿ 100 ಎರೆಹುಳು ಗೊಬ್ಬರದ ಚೀಲಗಳು, 30 ಪಿವಿಸಿ ಪೈಪ್‌ಗಳನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಗ್ರಾಮದ ಜನರೆಲ್ಲ ಸೇರಿ ಟ್ಯ್ಯಾಕ್ಟರ್​ನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಅಕ್ರಮವೆಸಗಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಮೈಸೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು

 

ಕಲಬುರಗಿ: ಕೃಷಿ ಪರಿಕರಗಳನ್ನ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತು

ಮೈಸೂರು:ಮೈಸೂರು ಮಿನಿ ವಿಧಾನಸೌಧದ ಹಿಂಭಾಗದ ಅನಧಿಕೃತ ಕಟ್ಟಡಗಳ ತೆರವಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಅವರು ಆದೇಶಿಸಿದ್ದಾರೆ. ತಹಶೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಜೆಸಿಬಿಗಳ ಮೂಲಕ ಅಕ್ರಮ ಕಟ್ಟಡ ತೆರವು ಮಾಡಲಾಗುತ್ತಿದೆ. ಈ ವೇಳೆ ಕೆಲವರಿಂದ ವಿರೋಧ ನೋಟಿಸ್ ನೀಡಿಲ್ಲವೆಂದು ಕ್ಯಾತೆ ತೆಗೆದಿದ್ದು, ಯಾವುದಕ್ಕೂ ಕೇರ್ ಮಾಡದೆ ಅನಧಿಕೃತ ಕಟ್ಟಡ ನೆಲಸಮ ಮಾಡಲಾಗುತ್ತಿದೆ. ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ವಹಿಸಲಾಗಿದೆ.


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

Spread the loveಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ