Breaking News

ಹಾವೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕ ಬಲಿ

Spread the love

ಹಾವೇರಿ, : ನಗರದ ಮಣಿಗಾರ ಓಣಿಯಲ್ಲಿಹೆಸ್ಕಾಂ(Hescom) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕನೋರ್ವ ಬಲಿಯಾದ ಘಟನೆ ನಡೆದಿದೆ. ಸುರೇಶ್ (38) ಮೃತ ದುರ್ದೈವಿ. ಮತ್ತೋರ್ವನಿಗೆ ಲೈನ್​ಮನ್ ನಿಂಗಪ್ಪನಿಗೆ ಗಂಭಿರ ಗಾಯವಾಗಿದ್ದು, ಹಾವೇರಿ(Haveri) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ಖಡಿತಗೊಳಿಸಿ ಇಬ್ಬರು ಯುವಕರು ಹೊಸ ಲೈನ್ ಎಳೆಯುವ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಸಿಬ್ಬಂದಿ ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದಾನೆ. ಇನ್ನು ಲೈನ್ ಮನ್ ಶವ ಕಂಬದಲ್ಲಿಯೇ ನೇತಾಡುತ್ತಿದೆ.

ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ ಸಚಿವ ಶಿವಾನಂದ ಪಾಟೀಲ್

ಇನ್ನು ಘಟನೆ ಹಿನ್ನಲೆ ಮೃತ ಲೈನ್​ಮೆನ್ ಸುರೇಶ್ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳು ನಿಂಗಪ್ಪ ಆರೋಗ್ಯ ವಿಚಾರಿಸಿದ ಸಚಿವ ಶಿವಾನಂದ ಪಾಟೀಲ್, ‘ಗಾಯಾಳು ನಿಂಗಪ್ಪಗೆ 1 ಲಕ್ಷ ರೂ. ಪರಿಹಾರ ಕೊಡುತ್ತೇವೆ. ಜೊತೆಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ. ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಗಾಯಾಳುವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸ್ತೇವೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ಹೆಸ್ಕಾಂ ಎಂಡಿ ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಟ್ಯಾಕ್ಟರ್ ಚಾಲಕನ ನಿರ್ಲಕ್ಷ್ಯ; ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗದ ಹಳೆ ಮಂಡ್ಲಿ ಬಳಿ ಟ್ರ್ಯಾಕ್ಟರ್ ಹಾಗೂ ಬೈಕ್​ ನಡುವೆ​ ಅಪಘಾತವಾಗಿದ್ದು, ಬೈಕ್ ಸವಾರ ವಾಸೀಂ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದ ಟ್ರ್ಯಾಕ್ಟರ್ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್​ ಆಗಿದ್ದಾನೆ. ಮೃತ ಯುವಕ ಬೈಕ್​ನಲ್ಲಿ ಮನೆಯಿಂದ ಶಿವಮೊಗ್ಗಕ್ಕೆ ನಗರಕ್ಕೆ ಹೋಗುವ ಸಂದರ್ಭದಲ್ದಿ ಈ ದುರ್ಘಟನೆ ನಡೆದಿದೆ. ಇನ್ನು ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಟ್ರ್ಯಾಕ್ಟರ್ ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ