Breaking News

ರಾಮಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ಕಟ್ಟಿಲ್ಲ. :ಸಂತೋಷ್ ಲಾಡ್

Spread the love

ಹುಬ್ಬಳ್ಳಿ : ಅಯೋಧ್ಯೆಯಲ್ಲಿ ರಾಮಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ಕಟ್ಟಿಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆ ಆಗಲ್ಲ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇವಲ ರಾಜಕೀಯ ಇಚ್ಛಾಶಕ್ತಿಯ ಕಾರಣಕ್ಕಾಗಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗಿದೆ.

 

ಅದರ ಹೊರತಾಗಿ ಬೇರೆ ಏನೂ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆಯಾಗುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ನಿರ್ಮಾಣ ಮಾಡಲಾಗಿಲ್ಲ.

ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸಿದಂತ ಅವರು, ಕೇವಲ ರಾಮ, ರಹಿಮ, ಅಪ್ಘಾನಿಸ್ತಾನ, ಪಾಕಿಸ್ತಾನ ಹೆಸರು ಮುಂದೆ ಇಟ್ಟುಕೊಂಡು ಮತ ಕೇಳುವುದಷ್ಟೇ ಮಾಡಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹೊತ್ತಿನಲ್ಲೇ ರಾಮಮಂದಿರ ವಿಚಾರವನ್ನು ಇಟ್ಟುಕೊಂಡು ಮತ ಕೇಳೋದಕ್ಕಷ್ಟೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಅದರ ಹೊರತಾಗಿ ಬೇರೆ ಏನೂ ಇಲ್ಲ ಎಂಬುದಾಗಿ ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ