ವಿಜಯಪುರ, : ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ (Department of Social Welfare, Karnataka) ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿ ಬೇರೆಯೇ ಧ್ಯೇಯವಾಕ್ಯ ಅಳವಡಿಸಲಾಗಿದೆ. ವಿಜಯಪುರ (Vijayapura)ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು (Kuvempu)ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿದೆ. ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಹೊಸ ಬರಹ ಕಾಣಿಸುತ್ತಿದೆ.
ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂದ ಉದ್ದೇಶದಿಂದ ಬರಹ ಬದಲಾವಣೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ, ವಸತಿ, ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ. ಪೋಷಕರು ಧೈರ್ಯವಾಗಿ ಮಾತನಾಡಲಿ ಎಂಬ ಉದ್ದೇಶ ಮಾತ್ರ ಬರಹ ಬದಲಾಯಿಸಿದ್ದರ ಹಿಂದಿರುವುದು ಎಂದು ಉದ್ದೇಶವಾಗಿದೆ