Breaking News

ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

Spread the love

ಯಾದಗಿರಿ, : ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ(died)ಹೊಂದಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ನಡೆದಿದೆ. ಸವಾರರಾದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು.

ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದು, ಗುರುತು, ಪತ್ತೆಗಾಗಿ ಶವದ ಫೋಟೊವನ್ನು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ರವಾನೆ ಮಾಡಿದ್ದಾರೆ. ಕೊಲೆನಾ ಇಲ್ಲಾ ಆತ್ಮಹತ್ಯೆನಾ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

Spread the loveಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ