ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್’ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.
ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್‍ಗಿಂತ 46 ಸಾವಿರ ಕೋಟಿ ರೂ. ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮಾನ ನೀಡಲಿದ್ದಾರೆ. 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆಂದು ಹೇಳಿದರು.