Breaking News
Home / ರಾಜಕೀಯ / ತಾಂಡಾಗಳಲ್ಲಿ‌ ಹೆಚ್ಚುತ್ತಿದೆ ಮತಾಂತರ: ಪ್ರಮೋದ್ ಮುತಾಲಿಕ್

ತಾಂಡಾಗಳಲ್ಲಿ‌ ಹೆಚ್ಚುತ್ತಿದೆ ಮತಾಂತರ: ಪ್ರಮೋದ್ ಮುತಾಲಿಕ್

Spread the love

ವಿಜಯಪುರ: ರಾಜ್ಯದಲ್ಲಿನ‌ ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಇದೇ ರೀತಿ ಮತಾಂತರ ಮುಂದುವರಿದರೆ ವಿಶೇಷ ಪಡೆ ರಚನೆ‌ ರಚಿಸಿ ತಡೆಯಲು ಮುಂದಾಗುವುದಾಗಿ ಎಚ್ಚರಿಸಿದ್ದಾರೆ. ನಿಮ್ಮ ಪ್ರಾರ್ಥನೆ ಚರ್ಚ್‌ ಒಳಗೆ ಇರಲಿ. ಹೊರಗಡೆ, ತಾಂಡಾಗಳಲ್ಲಿ ಮೋಸಮಾಡಿ ನೀವು ಮಾಡುವ ಕೆಲಸವನ್ನು ಏಸು ಒಪ್ಪುವುದಿಲ್ಲ ಎಂದರು.

ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ಏನೇನೋ ತಪ್ಪು ಮಾಹಿತಿ ನೀಡಿ, ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು. ಮತಾಂತರ ನಿಷೇಧ ಕಾಯ್ದೆ ಈಗಲೂ ಜಾರಿಯಲ್ಲಿದೆ. ಅದನ್ನು ಪಾಲಿಸಬೇಕು ಎಂದು ಮುತಾಲಿಕ್ ಹೇಳಿದರು.

ರಾಮಮಂದಿರ ನಿರ್ಮಾಣ ಹಿನ್ನೆಲೆ ರಾಜಕೀಯ ಅಧಿಕಾರ ಏಕೆ ತೆಗೆದುಕೊಳ್ಳಬಾರದು? ಎಂದು ಪ್ರಶ್ನಿಸಿದರು. ಇಡೀ ದೇಶದಲ್ಲಿ ರಾಮನ ಪರವಾಗಿ ನಿಂತಿದ್ದೇ ಬಿಜೆಪಿ, ಆರೆಸ್ಸೆಸ್, ವಿಎಚ್‌ಪಿ, ಶ್ರೀರಾಮ ಸೇನೆಯಂತಹ ಸಂಘಟನೆಗಳು. ಕಾಂಗ್ರೆಸ್ ಬಾಬರನ ಪರವಾಗಿ ನಿಂತಿತ್ತು. ನಾವು ರಾಮರಾಜ್ಯ ಸ್ಥಾಪಿಸುವ ಸಲುವಾಗಿಯೇ ರಾಮನ ಹೆಸರು ಹೇಳುತ್ತೇವೆಯೇ ಹೊರತು ಸ್ವಾರ್ಥಕ್ಕಾಗಿ ಅಲ್ಲ ಎಂದರು.

ನಾವೂ ರಾಮಮಂದಿರ ನಿರ್ಮಿಸುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುವುದು ಬರೀ ಬುರುಡೆ. ಮುಸ್ಲಿಮರಿಗೆ, ಕ್ರೈಸ್ತರಿಗೆ ಹಣ ಇಡಲು ನಿಮಗೆ ಸಾಧ್ಯವಿದೆ. ರಾಮನ ದೇವಸ್ಥಾನಕ್ಕೆ ಏಕೆ ಹಣವಿಲ್ಲ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಬುಧವಾರ ಮತ್ತೆ ಎರಡು ಅನಧಿಕೃತ ಆಸ್ಪತ್ರೆ ಸೀಜ್

Spread the loveಚನ್ನಮ್ಮನ ಕಿತ್ತೂರು : ಮಕ್ಕಳ ಮಾರಾಟ ಹಾಗೂ ಭ್ರೂಣ ಹತ್ಯೆ ಪ್ರಕರಣದ ಬೆನ್ನಲೇ ಕಿತ್ತೂರಿನಲ್ಲಿ ಬುಧವಾರ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ