ಬೆಳಗಾವಿ – ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಕುರಿತು ದೆಹಲಿಯಲ್ಲಾಗಿರುವ ಬೆಳವಣಿಗೆಗಳ ಮಾಹಿತಿ ನೀಡಿದರು.
ಕಳೆದ ನಾಲ್ಕು ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ ಅವರು, ಹಲವು ಕೇಂದ್ರದ ಮಂತ್ರಿಗಳ ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಹಾಗೂ ಯೋಜನೆಗಳ ಬಗ್ಗೆ ಚರ್ಚಿಸಿದ ನಂತರ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ರಾಜ್ಯದ ಯೋಜನೆಗಳ ಬಗ್ಗೆ ಕೇಂದ್ರದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ ಅವರು, ಅದರ ಬಗ್ಗೆ ವಿವರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು.
Laxmi News 24×7