Breaking News

ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಗೊತ್ತಿದೆ: ಡಿಕೆ

Spread the love

ಬೆಂಗಳೂರು, ಫೆ.19:ರಾಜ್ಯಸಭೆ ಚುನಾವಣೆಗೆ(Rajya Sabha Election) ಬಿಜೆಪಿ, ಜೆಡಿಎಸ್ ಮೈತ್ರಿ 5ನೇ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ (Congress) ಪಾಳೆಯಕ್ಕೆ ತಲೆಬಿಸಿ ಉಂಟುಮಾಡಿದೆ. ಅಡ್ಡ ಮತದಾನದ ಭೀತಿಯೂ ಎದುರಾಗಿದೆ. ಆ ಮೂಲಕ ಕಳೆದ ಎರಡೂ ರಾಜ್ಯಸಭಾ ಸೋಲಿನ ಸೇಡನ್ನು ಈ ಚುನಾವಣೆಯಲ್ಲಿ ತೀರಿಸಿಕೊಳ್ಳಲು ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮುಂದಾಗಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ (DK Shivakumar), ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಗೊತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಗೊತ್ತಿದೆ: ಡಿಕೆ ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಏನೇನೋ ಹೇಳಿದ್ದಾರೆ. ಕುಮಾರಸ್ವಾಮಿ ಯಾಱರಿಗೆ ಕಾಲ್ ಮಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ನನಗೆ ಎಲ್ಲರೂ ಹೇಳುತ್ತಿದ್ದಾರೆ. ಬಿಜೆಪಿ ಸ್ಟ್ರಾಟಜಿ ಏನು ಎಂದು ಎಲ್ಲವೂ ಗೊತ್ತಾಗಿದೆ ಎಂದರು. ಅಡ್ಡ ಮತದಾನಕ್ಕೆ ಪ್ರಯತ್ನ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸುಮ್ಮನೆ ಅರ್ಜಿ ಹಾಕ್ತಾರಾ ಎಂದು ಹೇಳುವ ಮೂಲಕ ಅಡ್ಡ ಮತದಾನಕ್ಕೇ ರಾಜ್ಯಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹಾಕಿದೆ ಎಂದರು. ಅಲ್ಲದೆ, ಏನೇನು ನಡೆಯುತ್ತಿದೆ ಅನ್ನೋದು ನಮಗೆಲ್ಲವೂ ಗೊತ್ತಿದೆ ಎಂದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ