Breaking News
Home / ರಾಜಕೀಯ / ಬರ ಪೀಡಿತ ಪ್ರತಿ ತಾಲೂಕುಗಳಲ್ಲಿ ಮೇವು ಬ್ಯಾಂಕ್

ಬರ ಪೀಡಿತ ಪ್ರತಿ ತಾಲೂಕುಗಳಲ್ಲಿ ಮೇವು ಬ್ಯಾಂಕ್

Spread the love

ಧಾರವಾಡ, ಫೆಬ್ರವರಿ 19; ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸಂಕಷ್ಟಕ್ಕೆ ಸಿಲುಕಿವೆ. ಧಾರವಾಡ ಜಿಲ್ಲೆಯಲ್ಲಿ ಬರಪೀಡಿತ ತಾಲೂಕಿಗೊಂದು ಮೇವು ಬ್ಯಾಂಕ್ ಆರಂಭ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸೋಮವಾರ ಮಾದನಭಾವಿ ಸರ್ಕಾರಿ ಗೋಶಾಲೆಗೆ ಭೇಟಿ ನೀಡಿದರು.
ಜಿಲ್ಲೆಯಲ್ಲಿ 1,38,492 ಟನ್ ಮೇವು ದಾಸ್ತಾನು ಲಭ್ಯವಿದೆ. ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ಜನರ ಬೇಡಿಕೆಗೆ ಅನುಗುಣವಾಗಿ ಉದ್ಯೋಗ ನೀಡಲು ಜಿಲ್ಲಾಡಳಿತ ಅಗತ್ಯವಾದ ಕ್ರಮಕೈಗೊಂಡಿದೆ ಎಂದರು.ಬರ ಪರಿಹಾರ: ಒಂದೇ ಒಂದು ರೂಪಾಯಿಯನ್ನು ಕೊಟ್ಟಿಲ್ಲ: ಡಿ ಕೆ ಶಿವಕುಮಾರ್‌ ಹೇಳಿದ್ದೇನು ಜಾನವಾರುಗಳಿಗೆ ಮೇವು: 20ನೇ ಜಾನುವಾರು ಗಣತಿ ಪ್ರಕಾರ ಧಾರವಾಡ ಜಿಲ್ಲೆಯಲ್ಲಿ 2,33,461 ದೊಡ್ಡ ಮತ್ತು 1,53,938 ಸಣ್ಣ ಪ್ರಾಣಿಗಳು ಸೇರಿ ಒಟ್ಟು 3,87,399 ಪ್ರಾಣಿಗಳಿವೆ. ಸಣ್ಣ ಮತ್ತು ದೊಡ್ಡ ಪ್ರಾಣಿಗಳಿಗೆ ಅನುಗುಣವಾಗಿ ಅಂದಾಜು ಪ್ರತಿದಿನ 6 ಕೆಜಿಯಂತೆ ಪ್ರತಿ ವಾರಕ್ಕೆ ಸರಾಸರಿ 10.261 ಟನ್ ಮೇವು ಬೇಕಾಗುತ್ತದೆ. ಕೆಲವು ರೈತರು ಮುಂಗಾರಿನಲ್ಲಿ ಮತ್ತು ಹಿಂಗಾರಿನಲ್ಲಿ ಸ್ವಂತ ಮೇವು ಸಂಗ್ರಹ ಹೊಂದಿದ್ದಾರೆ. ಆದರೂ ಜಿಲ್ಲಾಡಳಿತದಿಂದ ಮೇವು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಬರ ಪೀಡಿತ ಪ್ರದೇಶಗಳ 32 ಲಕ್ಷ ರೈತರ ಖಾತೆಗೆ ರೂ.575 ಕೋಟಿ ಪರಿಹಾರ ಬಿಡುಗಡೆಜಿಲ್ಲೆಯಲ್ಲಿ ಮುಂದಿನ 12 ರಿಂದ 13 ವಾರಕ್ಕೆ ಬೇಕಾಗುವಷ್ಟು ಸುಮಾರು 1,38,492 ಟನ್ ಮೇವು ದಾಸ್ತಾನು ಇದೆ. ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುತ್ತದೆ. ಶೀಘ್ರದಲ್ಲಿ ಹುಬ್ಬಳ್ಳಿ ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿಯಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡಲಾಗಿದೆ.
ಧಾರವಾಡ; ಬರ ಪೀಡಿತ ಪ್ರತಿ ತಾಲೂಕುಗಳಲ್ಲಿ ಮೇವು ಬ್ಯಾಂಕ್
ಫೆಬ್ರವರಿ ತಿಂಗಳ ಅಂತ್ಯದೊಳಗೆ ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿ ತಾಲೂಕಿಗೆ ಒಂದು ಮೇವು ಬ್ಯಾಂಕ್ ಆರಂಭಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಕೊಡಗು ಜಿಲ್ಲೆಯಲ್ಲಿ ಬರ; ಸಹಾಯವಾಣಿ ಕೇಂದ್ರ ಆರಂಭ ಮಾದನಭಾವಿಯಲ್ಲಿ ಕಳೆದ ಒಂದು ವರ್ಷದ ಹಿಂದೆ ಸರ್ಕಾರಿ ಗೋಶಾಲೆ ಆರಂಭಿಸಲಾಗಿದೆ. ಈ ಗೋಶಾಲೆಯಲ್ಲಿ ಈಗಾಗಲೇ ಸುಮಾರು 15ಕ್ಕೂ ಹೆಚ್ಚು ಆಕಳು, ಕರು ಮತ್ತು 17ಕ್ಕೂ ಹೆಚ್ಚು ಎಮ್ಮೆ ಹಾಗೂ ಕರುಗಳಿವೆ. ರೈತರು ತಮಗೆ ಪಶುಪಾಲನೆಗೆ ತೊಂದರೆ, ಅನಾನುಕೂಲವಿದ್ದಲ್ಲಿ ತಮ್ಮ ಹಸುಗಳನ್ನು ಈ ಗೋಶಾಲೆಗೆ ನೀಡಹುದು ಎಂದರು.ಸುಮಾರು 1 ಸಾವಿರ ದನಗಳಿರುವ ಖಾಸಗಿಯಾಗಿ 10 ಗೋಶಾಲೆಗಳು ಜಿಲ್ಲೆಯಲ್ಲಿವೆ.
ಇವುಗಳಿಗೆ ಪುಣ್ಯಕೋಟಿ ಹಾಗೂ ಪಿಂಜಾರಪೋಳ ಯೋಜನೆಗಳಡಿ ಸರ್ಕಾರದ ಸಹಾಯಧನ ಹಾಗೂ ದಾನಿಗಳ ನೆರವು ನೀಡಲಾಗುತ್ತಿದೆ ಎಂದರು.ಈಗಾಗಲೇ ಜಿಲ್ಲೆಯಲ್ಲಿ ಜೂನ್ ತಿಂಗಳವರೆಗೂ ಅಗತ್ಯವಿರುವಷ್ಟು ಮೇವು ದಾಸ್ತಾನು ಹೊಂದಲಾಗಿದೆ. ಹಿಂಗಾರಿನ ಮೇವು ಸಹ ರೈತರಿಗೆ ಸಿಗುತ್ತದೆ. ಮೇವು ಪೂರೈಕೆಗಾಗಿ ಟೆಂಡರ್ ಕರೆದು ಪೂರೈಕೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಮೇವು ಬೇಡಿಕೆ ಬರಬಹುದಾದ ಹೋಬಳಿಗಳನ್ನು ಗುರುತಿಸಲಾಗಿದ್ದು, ಅಗತ್ಯವಿದ್ದಲ್ಲಿ ಮೇವು ಬ್ಯಾಂಕ್ ತೆರೆಯಲು ಕ್ರಮಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ನೀರಾವರಿ ಅನುಕೂಲವಿರುವ ಮತ್ತು ಮೇವು ಬೆಳೆಯಲು ಆಸಕ್ತಿ ಇರುವ ರೈತರಿಗೆ ಇಲ್ಲಿವರೆಗೆ ವಿವಿಧ ಬೆಳೆಗಳ 39 ಸಾವಿರ ಬೀಜದ ಪಾಕೆಟ್‍ಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗಿದೆ.ಕರ್ನಾಟಕ ಸರ್ಕಾರ ಈಗಾಗಲೇ 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ 2 ಸಾವಿರ ರೂ. ವರೆಗೆ ಪಾವತಿಸಲು ನಿರ್ಧರಿಸಿದೆ.
ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್‍ಡಿಆರ್‍ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್‍ಡಿಆರ್‍ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದೆ.ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ, ಪ್ರೂಟ್ಸ್ ಐಡಿ ಹೊಂದಿರುವ ಮತ್ತು ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿದೆ.

Spread the love

About Laxminews 24x7

Check Also

ಎಣ್ಣೆಯಲ್ಲೂ ಬಡವರಿಗೆ ಬರೆ, ಶ್ರೀಮಂತರ ಮದ್ಯದ ದರ ಇಳಿಕೆ, ಬಡವರ ಮದ್ಯ ದುಬಾರಿ!

Spread the love ಬೆಂಗಳೂರು: ಕರ್ನಾಟಕದಲ್ಲಿ ಒಂದೇ ಬಾರಿ ಮದ್ಯದ ದರ ಏರಿಕೆ ಮತ್ತು ಇಳಿಕೆ ಎರಡೂ ಆಗುತ್ತಿದೆ! ಹೌದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ