Breaking News

ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ: ಕೃಷ್ಣ ಬೈರೇಗೌಡ

Spread the love

ಬೆಂಗಳೂರು,: ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.”ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆ ಮಾಡಲಾಗುತ್ತಿದೆ.
ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂಬ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೂಡ್ಲಿ ಹೇಳಿದ್ದಾರೆ. ಇದಕ್ಕೆ ಸಚಿವರು ಉತ್ತರಿಸಿದ್ದಾರೆ. “ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು” ಎಂದು ಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.Government Jobs: ಕಂದಾಯ ಇಲಾಖೆಯ 1,000 ಹುದ್ದೆ ನೇಮಕಾತಿ; ವಿದ್ಯಾರ್ಹತೆ, ಪರೀಕ್ಷೆ ವಿವರ”ಇತರ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಯಲ್ಲಿ ನೌಕರರ ಸಂಖ್ಯೆ ಅಧಿಕವಿದೆ. ಅಲ್ಲದೆ, ಸಾರ್ವಜನಿಕರಿಗೆ ಶೀಘ್ರ ಸೇವೆ ನೀಡುವ ಉದ್ದೇಶಿದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಹಸಿರು ನಿಶಾನೆ ಕೊಟ್ಟಿದ್ದಾರೆ” ಎಂದು ಮಾಹಿತಿ ತಿಳಿಸಿದ್ದಾರೆ. ನೌಕರರು ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ”ಸರ್ಕಾರಕ್ಕೆ ಸಾರ್ವಜನಿಕರ ಹಿತ ಮುಖ್ಯ. ಹೀಗಾಗಿ ಕಂದಾಯ ಇಲಾಖೆ ನೌಕರರು ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ. ಅವರು ಸರ್ಕಾರ ನೌಕರಿ ಕೊಟ್ಟ ಕಡೆ ಕೆಲಸ ಮಾಡಲಿ. ಕಳೆದ ಸರ್ಕಾರ ತುಂಬಾ ಜನರನ್ನು ಬೇರೆಡೆ ನಿಯೋಜನೆ ಮಾಡಿದ್ದಾರೆ.ನನಗೂ ಕನಿಷ್ಠ 2000 ಉದ್ಯೋಗಿಗಳ ನಿಯೋಜನೆಗೆ ಮನವಿ ಸಲ್ಲಿಸಲಾಗಿದೆ.
ಆದರೆ, ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ. ಯಾರನ್ನೂ ಮೂಲ ಸ್ಥಾನದಿಂದ ನಿಯೋಜನೆಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜನರಿಗೆ ಸರಳ ಹಾಗೂ ಶೀಘ್ರ ಸೇವೆ ಒದಗಿಸಲು ಸೂಚಿಸಲಾಗಿದೆ” ಎಂದಿದ್ದಾರೆ.

Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ