Breaking News

KAS ಅಧಿಕಾರಿ ಸುಧಾಗೆ ಮುಂದಿದೆ ಮಾರಿಹಬ್ಬ..!

Spread the love

ಬೆಂಗಳೂರು,ನ.13- ಅಕ್ರಮ ಆಸ್ತಿ ಸಂಪಾದನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಿಂದ ದಾಳಿಗೊಳಗಾಗಿರುವ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಬಿ.ಸುಧಾಗೆ ಇನ್ನಷ್ಟು ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಸಿಬಿ ದಾಳಿ ಸಂದರ್ಭದಲ್ಲಿ ಸುಮಾರು ನೂರು ಕೋಟಿಗೂ ಅಧಿಕ ಆಕ್ರಮ ಆಸ್ತಿ ಸಂಪಾದನೆ ಮಾಡಿರುವುದು ಕಂಡು ಬಂದಿರುವ ಕಾರಣ ಜಾರಿ ನಿದೇರ್ಶನಾಲಯ(ಇಡಿ) ಹಾಗೂ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

ಐದು ಕೋಟಿಗೂ ಹೆಚ್ಚಿನ ಭ್ರಷ್ಟಾಚಾರದ ಪ್ರಕರಣ ಕಂಡು ಬಂದರೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಯ ಮೂಲಕ ವಿಚಾರಣೆ ನಡೆಸಬೇಕೆಂಬ ನಿಯಮವಿದೆ. ಕೆಎಎಸ್ ಅಧಿಕಾರಿಯಾಗಿರುವ ಸುಧಾ ಪ್ರಕರಣವನ್ನು ಇಡಿ ಹಾಗೂ ಐಟಿ ಮೂಲಕ ತನಿಖೆಗೆ ರಾಜ್ಯ ಸರ್ಕಾರ ವಹಿಸಲು ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಒಂದು ವಾರದಿಂದ ಸುಧಾ ಮತ್ತು ಕುಟುಂಬಸ್ಥರ ಆಸ್ತಿ, ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಎಸಿಬಿ, ಅವರ ಆಸ್ತಿಯ ವಿವರಕ್ಕೆ ಸಂಬಂಧಿಸಿದಂತೆ 200ಕ್ಕೂ ಹೆಚ್ಚು ದಾಖಲೆಗಳನ್ನು ಈಗಾಗಲೇ ಜಪ್ತಿ ಮಾಡಿದೆ. ಆದರೆ, ಎಲ್ಲ ಮಾಹಿತಿಗಳನ್ನು ಸಂಗ್ರಹ ಮಾಡಲು ಇನ್ನೂ ಸ್ವಲ್ಪ ಸಮಯವಾಕಾಶ ಬೇಕಾಗಬಹುದು ಎಂದು ತಿಳಿಸಿದೆ. ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಸುಧಾ ಬಿಡಿಎ ಅಧಿಕಾರಿಯಾಗಿದ್ದಾಗ ಅವರ ಖಾತೆಗೆ ಬಹಳಷ್ಟು ಹಣ ಜಮಾವಣೆಯಾಗಿದ್ದು, ಇದರ ಬಗ್ಗೆ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಸದ್ಯ ಸುಧಾ ಅವರನ್ನು ಎಸಿಬಿ ತನಿಖೆ ನಡೆಸುತ್ತಿದ್ದು, ತದನಂತರ ಅವರು ಜಪ್ತಿಮಾಡಿದ ದಾಖಲಾತಿಗಳನ್ನು ಆದಾಯ ಇಲಾಖೆ ಹಾಗೂ ಇಡಿಗೆ ಮಾಹಿತಿ ನೀಡಲಿದೆ.ಡಾ. ಬಿ.ಸುಧಾ ಅವರು ಭ್ರಷ್ಟಾಚಾರ, ಅವ್ಯಹಾರಗಳಲ್ಲಿ ಭಾಗಿಯಾದ ಸಂಬಂಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಏಳನೇ ತಾರೀಖಿನಂದು ಬೆಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಯ ಒಟ್ಟು 7 ಸ್ಥಳಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ, ಹಲವಾರು ಅಕ್ರಮ ಆಸ್ತಿಗಳು ಪತ್ತೆಯಾಗಿದ್ದು, ಸದ್ಯ ಲೆಕ್ಕಾಚಾರ ಮುಂದುವರಿದಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ