Breaking News

ಫಾಲ್ಸ್ ನೋಡಲು ಹೋಗಿ ಬೈಕ್ ಸಮೇತ ಪ್ರಪಾತಕ್ಕೆ ಬಿದ್ದ ವ್ಯಕ್ತಿ

Spread the love

ಬೆಳಗಾವಿ, ಫೆ.20: ಜಿಲ್ಲೆಯ ಖಾನಾಪುರ ತಾಲೂಕಿನ ಚಿಕಲೆ ಗ್ರಾಮದ ಫಾಲ್ಸ್​​​ ನೋಡಲು ಹೋಗಿ ಬೈಕ್ ಸಮೇತ 100 ಅಡಿ ಪ್ರಪಾತಕ್ಕೆ ಬಿದ್ದಿದ್ದ ಸವಾರನನ್ನು ರಕ್ಷಿಸಲಾಗಿದೆ. ಬೆಳಗಾವಿ ಕ್ಯಾಂಪ್ ಪ್ರದೇಶದ ವಿನಾಯಕ ಬುತ್ತುಲ್ಕರ್ ರಕ್ಷಣೆ ಮಾಡಲಾದ ವ್ಯಕ್ತಿ.

ಖಾನಾಪುರ ಗೋವಾ ಗಡಿ ಭಾಗದಲ್ಲಿರುವ ಪ್ರಸಿದ್ಧ ಚಿಕಲೆ ಫಾಲ್ಸ್ ನೋಡಲು ಸ್ನೇಹಿತರ ಜೊತೆಗೆ ಬಂದಿದ್ದಾಗ ವಿನಾಯಕ ಬೈಕ್ ಸಮೇತ ಪ್ರಪಾತಕ್ಕೆ ಬಿದ್ದಿದ್ದರು. ಬೈಕ್ ಮೇಲೆ ಹೋಗುವಾಗ ಆಯತಪ್ಪಿ ನೂರು ಅಡಿ ಪ್ರಪಾತಕ್ಕೆ ಬಿದ್ದಿದ್ದರು. ಇದನ್ನು ಗಮನಿಸಿದ್ದ ಸ್ನೇಹಿತರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿ ವಿನಾಯಕ್​ನನ್ನು ರಕ್ಷಣೆ ಮಾಡಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿನಾಯಕ್​ಗೆ ಮುಖ, ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ