Breaking News

ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

Spread the love

ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವಸಂತ ಜೆರೋಸಾ ಶಾಲೆಯ(St. Gerosa School, Mangaluru) ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶ್ರೀರಾಮನಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆಡಿಯೋ ಮಾಡಿದ ಪೋಷಕಿಗೆ ಇವರೇ ಎಂದು ಮಹಿಳೆಯ ಕುಟುಂಬ ಸಹಿತ ಫೋಟೋವನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಅಲ್ಲದೆ, ಪ್ರಕರಣದ ನಂತರ ವಿದೇಶದಿಂದ ನಿರಂತರವಾಗಿ ಕರೆ ಮಾಡಿ ಬೆದರಿಕೆ ಹಾಕುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ಜೆರೋಸಾ ಶಾಲೆಯ ಶಿಕ್ಷಕಿ ಧರ್ಮ ಅವಹೇಳನ ಪ್ರಕರಣ ಸಂಬಂಧ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ್ದು ಇವರೇ ಎಂದು ಹೇಳಿ ಮಂಗಳೂರಿನ ಗರೋಡಿ‌ ನಿವಾಸಿ ಕವಿತಾ ಅವರ ಕುಟುಂಬದ ಫೋಟೋದ ಜೊತೆಗೆ ಕವಿತಾರ ನಂಬರ್​ ಕೂಡ ವೈರಲ್ ಮಾಡಿದ್ದಾರೆ. ಇದರ ಜೊತೆಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಗೆ‌ ಕವಿತಾ ಅವರು ದೂರು ನೀಡಿದ್ದಾರೆ.

ಕವಿತಾ ಅವರ ಮಗಳು ಜೆರೋಸಾ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ. ಸಿಸ್ಟರ್ ಪ್ರಭಾ ವಿರುದ್ಧ ಪೋಷಕರ ಪ್ರತಿಭಟನೆಯಲ್ಲೂ ಭಾಗವಹಿಸಿದ್ದಳು. ಈ ನಡುವೆ, ಜೆರೋಸಾ ಶಿಕ್ಷಕಿ ಆಡಿಯೋ ವೈರಲ್ ಮಾಡಿದ್ದು ಕವಿತಾ ಅಂತ ಆರೋಪಿಸಿ ಬೆದರಿಕೆ ಹಾಕಲಾಗುತ್ತಿದೆ. ಕತಾರ್, ದುಬೈ, ಸೌದಿ ಸೇರಿ ಹಲವೆಡೆಯಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿವೆ. ಅವಾಚ್ಯವಾಗಿ ನಿಂದಿಸಿ ವಾಟ್ಸ್​ಆಯಪ್​ಗೆ ಅಶ್ಲೀಲವಾದ ಆಡಿಯೋ ಸಂದೇಶ ಕಳುಹಿಸಲಾಗುತ್ತಿದೆ.

ಕೆಲವು ವಾಟ್ಸ್​ಆಯಪ್​ ಗ್ರೂಪ್​ಗೆ ಕವಿತಾ ಅವರ ನಂಬರ್ ಸೇರಿಸಿ ನಿರಂತರ ಕಿರುಕುಳ ನೀಡಲಾಗುತ್ತಿದೆ. ಆಡಿಯೋ ವೈರಲ್ ಮಾಡುತ್ತೀಯಾ ಅಂತ ನಿರಂತರ ಬೆದರಿಕೆ ಕರೆ ಮಾಡಲಾಗಿದೆ. ಆದರೆ ವೈರಲ್ ಆಗಿರುವ ಆಡಿಯೋ ತನ್ನದಲ್ಲದಿದ್ದರೂ ನಿರಂತರ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಕವಿತಾ ಅವರು ಬೆದರಿಕೆ ಆಡಿಯೋ, ವಾಟ್ಸ್​ಆಯಪ್ ಸ್ಕ್ರೀನ್ ಶಾಟ್​ಗಳ ಸಹಿತ ಕಂಕನಾಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ