ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶ ಮೇರೆಗೆ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ.
ಗೋಕಾಕ : ಪ್ರಸ್ತುತ ಬರ ಹಾಗೂ ತೀವ್ರ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದರಿಂದ ಹಳ್ಳಿ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿತ್ತು, ಆದರಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳೊಂದಿಗೆ ಕರೆ ಮಾಡಿ ಮಾತನಾಡಿ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ ಮಾಡಿಸಿದ್ದಾರೆ.
ಗೋಕಾಕ ತಾಲೂಕು ಹಾಗೂ ಬಾಗಲಕೋಟೆ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಆಗಬಾರದೆಂದು ಘಟಪ್ರಭಾ ನದಿಯ ಮುಖಾಂತರ 2 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಬಳಸಬೇಕು, ವಿನಾಃ ಕಾರಣ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ಶಿವು ಪಾಟೀಲ, ಆರೀಫ್ ಪಿರಜಾದೆ ಇದ್ದರು.