Breaking News

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ವಿಷ ಕುಡಿದ ಯುವಕ!

Spread the love

ಶಿವಮೊಗ್ಗ: ಕೆಲಸಕ್ಕೆ (Job) ಹೋಗು ಎಂದಿದ್ದಕ್ಕೆ ಮನನೊಂದ ಯುವಕನೊಬ್ಬ (Youth) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ನಡೆದಿದೆ.

ಸಾಗರ್ (21) ಆತ್ಮಹತ್ಯೆಗೆ ಶರಣಾದ ಯುವಕ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಮನೆಯವರು ಸಾಗರ್‌ ಬಳಿ ಕೆಲಸಕ್ಕೆ ಹೋಗು ಎಂದು ಹೇಳಿದ್ದಾರೆ. ಇದರಿಂದಾಗಿ ಮನನೊಂದ ಯುವಕ ಫೆ.19ರಂದು ಜ್ಯೂಸ್‌ಗೆ ಇಲಿ ಪಾಷಾಣ ಬೆರೆಸಿಕೊಂಡು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ವಿಷಯ ತಿಳಿದ ಕೂಡಲೇ ತಕ್ಷಣ ಸಾಗರ್‌ನ ಪೋಷಕರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾಗರ್‌ ಮೃತಪಟ್ಟಿದ್ದಾನೆ.


Spread the love

About Laxminews 24x7

Check Also

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

Spread the loveವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ