ಬೆಂಗಳೂರು, ಫೆ.21: ಹೈಕೋರ್ಟ್ನಿಂದ ಭ್ರಷ್ಟಾಚಾರ ನಿಗ್ರಹ ದಳ(ACB) ರದ್ದು ಹಿನ್ನೆಲೆ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರವರ್ಗಾವಣೆಮಾಡಿದೆ. ಎಸಿಬಿಯಲ್ಲಿದ್ದ ಬರೊಬ್ಬರಿ 524 ಹುದ್ದೆಗಳನ್ನ ವಿಂಗಡಿಸಿ, ಎರಡು ಇಲಾಖೆಗೆ ವರ್ಗಾಹಿಸಲಾಗಿದೆ. 2022ರ ಆಗಸ್ಟ್.11 ರಂದು ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಎಸಿಬಿ ರದ್ದು ಹಿನ್ನೆಲೆ ಅಲ್ಲಿ ಇರುವಂತಹ ಹುದ್ದೆಗಳು ಖಾಲಿಯಾಗಿತ್ತು.
ಲೋಕಾಯುಕ್ತಕ್ಕೆ 266, ಪೊಲೀಸ್ ಇಲಾಖೆಗೆ 258 ಹುದ್ದೆಗಳ ವರ್ಗಾವಣೆ
ಇದೀಗ ಲೋಕಾಯುಕ್ತ ಸಂಸ್ಥೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಕೊರತೆ ಹಿನ್ನೆಲೆ ಅಧಿಕಾರಿ, ಸಿಬ್ಬಂದಿಯಿಂದ ಕೇಸ್ ಕ್ಲಿಯರ್ ಮಾಡಲು ಕಷ್ಟ ಆಗುತ್ತಿದ್ದು, ಹೆಚ್ಚುವರಿ ಅಧಿಕಾರಿ, ಸಿಬ್ಬಂದಿ ನೇಮಕಕ್ಕೆ ಲೋಕಾಯಕ್ತರು ಮನವಿ ಮಾಡಿದ್ದರು. ಹೀಗಾಗಿ ಎಸಿಬಿಯಲ್ಲಿದ್ದ ಹುದ್ದೆಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ. ಅದರಂತೆ ಭ್ರಷ್ಟಾಚಾರ ನಿಗ್ರಹ ದಳದಿಂದ ಲೋಕಾಯುಕ್ತಕ್ಕೆ 266 ಹುದ್ದೆಗಳು ಹಾಗೂ ಪೊಲೀಸ್ ಇಲಾಖೆಗೆ 258 ಹುದ್ದೆಗಳನ್ನು ವರ್ಗಾವಣೆ ಮಾಡಲಾಗಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸಿಬಿ ಸಂಸ್ಥೆಯನ್ನು ರದ್ದುಗೊಳಿಸಿ, ಆದೇಶ ಹೊರಡಿಸಿತ್ತು. ಜೊತೆಗೆ ಲೋಕಾಯುಕ್ಕೆ ಸಂಪೂರ್ಣ ಅಧಿಕಾರ ನೀಡಿತ್ತು. ಉಚ್ಚ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿನ ಅಂಶಗಳನ್ನು ಪರಿಶೀಲಿಸಿದ ಸರ್ಕಾರವು, ಈ ಕೆಳಕಂಡಂತೆ ಆದೇಶಿಸಿತ್ತು
. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿದೆ.
2. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ ಸಂಪೂರ್ಣ ಅಧಿಕಾರ ನೀಡಲಾಗಿದೆ.
3. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರ ನೀಡಲಾಗಿದೆ.
4. ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪುಸ್ತುತ ಬಾಕಿಯಿರುವ ತನಿಖೆಗಳು ವಿಚಾರಣೆಗಳು/ಇತರೆ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಖ್ಯೆಗೆ ವರ್ಗಾಯಿಸುವುದು ಎಂದಿತ್ತು.