Breaking News

ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ

Spread the love

ಬೆಂಗಳೂರು, ಫೆಬ್ರವರಿ 21: ಬೆಂಗಳೂರು, (ಫೆಬ್ರವರಿ 21): ಸಿಗರೇಟ್​​ಗಳ (cigarettes )ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು

 

ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ: ಮಸೂದೆ ಪಾಸ್

(ಫೆ.21) ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿದೆ.

ಇನ್ನು ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಬಾರ್ ರೆಸ್ಟೋರೆಂಟ್ ಹಾಗೂ ಇತರೆ ಕಡೆಗಳಲ್ಲಿ ಹುಕ್ಕಾ ಬಾರ್​ ನಿಷೇಧಿಸಲಾಗಿದೆ. ಹುಕ್ಕಾ ಬಾರ್ ಅನಧಿಕೃತವಾಗಿ‌ ನಡೆಸಿದರೆ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಹಾಗೂ 3 ವರ್ಷಕ್ಕೆ ವಿಸ್ತರಣೆ ಮಾಡುವ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ