Breaking News

ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

Spread the love

ಬೆಂಗಳೂರು, ಫೆಬ್ರವರಿ 22: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿಯಾಗಿದ್ದಾಗ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah)ಈಗ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ (Lokayukta) ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ರಾಜಕೀಯವಾಗಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗುವ ಎಲ್ಲ ಸಾಧ್ಯತೆಗಳಿವೆ.

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್​​​ಆರ್ ರಮೇಶ್‌ ಖಾಸಗಿ ದೂರು ಸಲ್ಲಿಸಿದ್ದರು. ಸಿಎಂ ಸಿದ್ದರಾಮಯ್ಯ ಹುದ್ದೆಯೊಂದಕ್ಕೆ ನೇಮಕ ಮಾಡಲು ವ್ಯಕ್ತಿಯೊಬ್ಬರಿಂದ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಏನಿದು ಪ್ರಕರಣ?

ಸಿದ್ದರಾಮಯ್ಯ ಅವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ (2013-18 ಅವಧಿಯಲ್ಲಿ) ಕಿಂಗ್ಸ್ ಕೋರ್ಟ್​​ನ ಎಲ್ ವಿವೇಕಾನಂದ ಎಂಬವರಿಂದ 1.30 ಕೋಟಿ ರೂಪಾಯಿ ಹಣ ಪಡೆದ ಆರೋಪ ಕೇಳಿಬಂದಿತ್ತು. ಹಣ ಪಡೆದು ವಿವೇಕಾನಂದ ಅವರನ್ನು 2014 ರಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಲಾಗಿತ್ತು ಎಂಬ ಆರೋಪ ವ್ಯಕ್ತವಾಗಿತ್ತು. ವಿವೇಕಾನಂದ ಅವರನ್ನು 3 ವರ್ಷದ ಅವಧಿಗೆ ನೇಮಕಮಾಡಿ ಆದೇಶ ಹೊರಡಿಸಲಾಗಿತ್ತು. ಈ ಬಗ್ಗೆ ಲೋಕಾಯುಕ್ತಕ್ಕೂ ಎನ್‌ಆರ್ ರಮೇಶ್ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆದು ಸಿದ್ದರಾಮಯ್ಯ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಬಿ ರಿಫೊರ್ಟ್​ನಲ್ಲಿ ಹೇಳಲಾಗಿತ್ತು.


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

Spread the loveಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ