ತುಮಕೂರು,: ತುಮಕೂರು (Tumkur) ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್ಗೆ (BCM Hostel) ಸಿದ್ದಂಗಾ ಮಠದಿಂದ(Siddaganga Matt) ಅಕ್ಕಿ ಎರವಲು ಪಡೆದು ವಿತರಿಸಿದ್ದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರನ್ನು ಎತ್ತಂಗಡಿ ಮಾಡಿದೆ. ಈ ಮೂಲಕ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಬ್ಬರೂ ಅಧಿಕಾರಿಗಳ ಮೇಲೆ ಸರ್ಕಾರ ಕ್ರಮ ಕೈಗೊಂಡಂತಾಗಿದೆ.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರನ್ನು ವರ್ಗಾವಣೆ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೇಮಲತಾ ಎಂ. ಅವರು ಆದೇಶ ಹೊರಡಿಸಿದ್ದಾರೆ. ಗಂಗಪ್ಪ ಅ ಮಾತೃ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ.ಇನ್ನು ಗಂಗಪ್ಪ ಅವರ ಸ್ಥಾನಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾಗಿದ್ದ ಸೋನಿಯಾ ವರ್ಣಿಕರ್ ಅವರನ್ನು ನೇಮಕ ಮಾಡಲಾಗಿದೆ.