Breaking News

ಮಾರ್ಚ್ 17 ರ ನಂತರ ಚುನಾವಣಾ ರಾಜಕೀಯದಿಂದ ಶ್ರೀನಿವಾಸ್ ಪ್ರಸಾದ್ ನಿವೃತ್ತಿ

Spread the love

ಮೈಸೂರು, ಫೆ.22: ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ (Srinivasa Prasad) ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು‌ ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಸಿದ್ದರಾಮಯ್ಯ (Siddaramaiah)ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಮುದ್ರದಲ್ಲಿ ಈಜಿರುವ ನಾಯಕ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ ಎಂದರು.

ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡುವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್ ಖಾನ್​ಗೆ ಏನು ವ್ಯತ್ಯಾಸ ಇದೆ ಹೇಳಿ? ಇಬ್ಬರು ಕೂಡಾ ಸುಮ್ಮನೆ ಕೂಗಾಡುತ್ತಾರೆ ಎಂದರು. ಅಲ್ಲದೆ, ಶೀಘ್ರದಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದರು.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ