Breaking News

ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಟ್ಟು ಬಿಡಿ

Spread the love

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ಶ್ರೀಮಂತ ದೇವಾಲಯಕ್ಕೆ ಸರಕಾರ ಕನ್ನ ಹಾಕಲು ಮುಂದಾಗಿದೆ. ದೇವಾಲಯಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ. ದಾನಿಗಳು ಅಲ್ಲೇ ಬಂದು ದಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನವನ್ನೂ ಸರ್ಕಾರ ಕೊಡುತ್ತಿಲ್ಲ. ರಾಜ್ಯದ ಹಣೆಬರಹ ಏನಾಗುತ್ತಿದೆ ನೋಡಿ ಎಂದರು. ಈ ಸರ್ಕಾರದ ದುರಾಡಳಿತದಿಂದಾಗಿ ಸರ್ಕಾರಿ ನೌಕರರಿಗೆ ಸಂಬಳವನ್ನೂ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ’ ಎಂದು ಆರೋಪಿಸಿದರು.

'ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ  ಹುಂಡಿ ಇಟ್ಟು ಬಿಡಿ: ದಾನಿಗಳು ಅಲ್ಲೇ ಬಂದು ದಾನ ಮಾಡ್ತಾರೆ'

ನಾಡಗೀತೆ ವಿಚಾರದಲ್ಲಿ ಸರ್ಕಾರ ಎಡವಟ್ಟುಗಳನ್ನು ಮಾಡಿದೆ. ಈ ಸರ್ಕಾರದ ಕಾರ್ಯಸೂಚಿ ಏನು ಎಂಬುದು ಈ ಆದೇಶಗಳಿಂದ ಗೊತ್ತಾಗುತ್ತದೆ. ಕನ್ನಡ ವಿರೋಧಿ ಚಿಂತನೆಯಲ್ಲಿದೆ. ಕನ್ನಡ ನಾಡು – ನುಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧಕ್ಕೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ