Breaking News

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ.

Spread the love

ಶಸ್ವಿ ಚಿತ್ರಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ(Sandalwood) ಕೀರ್ತಿಪತಾಕೆಯನ್ನು ವಿಶ್ವದಾಧ್ಯಂತ ಪಸರಿಸಿದ ಹೊಂಬಾಳೆ(Hombale) ಫಿಲಂಸ್‌(Films) ಇದೀಗ ಮತ್ತೊಂದು ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್(Yuva Rajkumar) ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ‘ಯುವ’ ಈ ಚಿತ್ರಕ್ಕೆ ನಾಯಕ‌ರಾಗಿ ಅಭಿನಯಿಸುವ ಮೂಲಕ ಕನ್ನಡ(Kannada) ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ.

 

“ಕೆ.ಜಿ.ಎಫ್”(KGF), “ಕಾಂತಾರ”(Kantara) ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ ಹೆಗ್ಗಳಿಗೆ ಹೊಂಬಾಳೆ ಫಿಲಂಸ್ ಹೊಂದಿದೆ. ಇದೀಗ ಇದೇ ಬ್ಯಾನರ್‌ನಲ್ಲಿ ದೊಡ್ಮನೆಯ ಮತ್ತೊಂದು ಕುಡಿ ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಮೂಲಕ ವಿಜಯ ಕಿರಗಂದೂರ್ ಹಾಗೂ ಚೆಲುವೇಗೌಡ ಅವರು ನಿರ್ಮಾಣ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆಯಿಂದಲೇ ನಿರ್ಮಾಣವಾಗಿದ್ದ ಪುನೀತ್ ರಾಜಕುಮಾರ್ ಅಭಿನಯದ “ರಾಜಕುಮಾರ” ಚಿತ್ರವನ್ನು ನಿರ್ದೇಶಿಸಿದ್ದ ಸಂತೋಷ್ ಆನಂದರಾಮ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.


Spread the love

About Laxminews 24x7

Check Also

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ

Spread the love ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ