ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾಗೆ ಟಿಕೆಟ್ ನೀಡುವ ವಿಷಯ ಚರ್ಚೆಯಾಗಿದೆ. ಆದರೆ, ಟಿಕೆಟ್ ಕೊಡಲು ನಾವು ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಿಲ್ಲ. ಅವರು ಚುನಾವಣೆಗೆ ಸ್ಪರ್ಧಿಸಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
‘ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಲಕ್ಷ್ಮಣರಾವ್ ಚಿಂಗಳೆ, ಗಜಾನನ ಬುಟಾಳಿ ಸೇರಿ ಹಲವು ಆಕಾಂಕ್ಷಿಗಳಿದ್ದಾರೆ. ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತೇವೆ ಹೊರತು ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.