Breaking News

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು: ‘ಕಾಂಗ್ರೆಸ್ ನಾಯಕ’ರಿಗೆ ಕೋರ್ಟ್ ಸಮನ್ಸ್

Spread the love

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ.

ಬಿಜೆಪಿ ವಿರುದ್ಧವಾಗಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಜಾಹೀರಾತು ನೀಡಲಾಗಿತ್ತು.

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು: 'ಕಾಂಗ್ರೆಸ್ ನಾಯಕ'ರಿಗೆ ಕೋರ್ಟ್ ಸಮನ್ಸ್

ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್‌ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ