Breaking News

ಅರ್ಧರಾತ್ರಿಯಲ್ಲಿ ಸಂಪೂರ್ಣ ಕಾಶಿ ಸುತ್ತಿದ ಪ್ರಧಾನಿ.

Spread the love

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ತಮ್ಮ ಸ್ವಂತ ಕ್ಷೇತ್ರವಾದ ವಾರಣಾಸಿಗೆ ಗುರುವಾರ ಅರ್ಧರಾತ್ರಿ ದಿಢೀರನೆ ಭೇಟಿ ನೀಡಿ ಸ್ಥಳೀಯವಾಗಿ ನಡೆದ ಇತ್ತೀಚಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

 

ಪ್ರಧಾನಿ ಮೋದಿ ಅವರು ನೂತನವಾಗಿ ನಿರ್ಮಿಸಿರುವ ಶಿವಪುರ-ಫುಲ್ವಾರಿಯಾ-ಲಾ-ತಾರಾ ಮಾರ್ಗವನ್ನು ಪರಿಶೀಲಿಸಲಾಯಿತು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ

 

360 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಈ ರಸ್ತೆಯನ್ನು ಇತ್ತೀಚೆಗಷ್ಟೇ ಲೋಕಾರ್ಪಣೆ ಮಾಡಲಾಗಿತ್ತು. ಇದರಿಂದ ದಕ್ಷಿಣ ವಾರಣಾಸಿ ಭಾಗದ ಜನರ ಸಂಚಾರ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಮೋದಿಯವರು ಹೇಳಿದ್ದಾರೆ.

ಈ ರಸ್ತೆಯಿಂದ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವಾರಣಾಸಿ ವಿಮಾನ ನಿಲ್ದಾಣಕ್ಕೆ ಪ್ರಯಾಣದ ಸಮ

ಯ ಅರ್ಧದಷ್ಟು ಕಡಿಮೆಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಈ ತಪಾಸಣೆಗೂ ಮುನ್ನ ಮೋದಿ ವಾರಣಾಸಿಯ ಬೀದಿಗಳಲ್ಲಿ ನಡೆದು ಸಾಗಿದರು. ರಾತ್ರಿಯಾಗಿದ್ದರೂ ಅವರನ್ನು ನೋಡಲು ಜನರು ಸಾಲುಗಟ್ಟಿ ನಿಂತಿದ್ದರು. ಪ್ರಧಾನಿಯವರ ಮೇಲೆ ಪುಷ್ಪವೃಷ್ಟಿ ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ