Breaking News

ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು‌ ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

Spread the love

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ನೀಡಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೆ, ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.

CONGRESS : ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು‌ ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

 

ವಿಧಾನಸಭೆಯ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಬಿಜೆಪಿಯ ವಿರುದ್ಧವ ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್‌ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ತದನಂತರ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ