ಬೆಂಗಳೂರು: ರಾಜ್ಯದ ವಸತಿ ಶಾಲೆಗಳಲ್ಲಿ (Residential School) ಸಿಬಿಎಸ್ ಸಿ (cbsc) ಪಠ್ಯಕ್ರಮ ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ (Social welfare department) ಸಚಿವ ಹೆಚ್.ಸಿ.ಮಹದೇವಪ್ಪ (H.C.Mahadevappa) ಹೇಳಿದರು.
ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ (congres) ಅನಿಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ವಸತಿ ಶಾಲೆಗಳಲ್ಲಿ ಸದ್ಯ ರಾಜ್ಯ ಪಠ್ಯಕ್ರಮ ಇದೆ. ಪ್ರತಿ ಜಿಲ್ಲೆಯ ಒಂದು ವಸತಿ ಶಾಲೆಯಲ್ಲಿ ಸಿಬಿಎಸ್ ಸಿ ಪಠ್ಯ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿರುವ ವಸತಿ ಶಾಲೆಗಳ ಪೈಕಿ ಪ್ರಸ್ತುತ ಕೇವಲ 84 ಶಾಲೆಗಳ ಪಿಯುಸಿವರೆಗಿನ ತರಗತಿಗಳಿವೆ. ಎಲ್ಲ ವಸತಿ ಶಾಲೆಗಳಲ್ಲೂ ಪಿಯುಸಿ ತರಗತಿ ಪ್ರಾರಂಭಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದ ಬಳಿಕ ವಸತಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
Laxmi News 24×7