Breaking News

ನಟಿ ಮಯೂರಿ ದೀಪಾವಳಿ ದಿನದಂದೇ ಗುಡ್ ನ್ಯೂಸ್ಬಹಿರಂಗ

Spread the love

ಬೆಂಗಳೂರು: ನಟಿ ಮಯೂರಿ ದೀಪಾವಳಿ ದಿನದಂದೇ ಗುಡ್ ನ್ಯೂಸ್ ಒಂದನ್ನು ಬಹಿರಂಗಪಡಿಸಿದ್ದಾರೆ.

ಮದುವೆ ಬಗ್ಗೆಯೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದ ಮಯೂರಿ, ಇದೀಗ ತಾನು ತಾಯಿಯಾಗುತ್ತಿರುವ ವಿಚಾರ ಕೂಡ ತಿಳಿಸಿದ್ದಾರೆ. ಈಗಾಗಲೇ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಕೊಂಡಿದ್ದು, ಆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಶುಭದಿನದಂದು ನಾವು ಪುಟ್ಟ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.ಇದೇ ವರ್ಷ ಜೂನ್ 12ರಂದು ತನ್ನ ಬಹುಕಾಲದ ಗೆಳೆಯ ಅರುಣ್ ಜೊತೆ ಮಯೂರಿ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಶುಭಲಗ್ನದಲ್ಲಿ ಮದುವೆಯಾಗಿದ್ದರು. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷದಿಂದ ಪರಸ್ಪರ ಪ್ರೀತಿಸಿ, ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದರು.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ