ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಡೆಯಲ್ಲ ಎಂದು ಹಳ್ಳಿ ಹಕ್ಕಿ ಖ್ಯಾತಿಯ ಎಂಎಲ್ಸಿ ಹೆಚ್. ವಿಶ್ವನಾಥ್ ಅವರು ಭವಿಷ್ಯ ನುಡಿದಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಕಾರಣ ಕಾಂಗ್ರೆಸ್ 2019ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿತ್ತು.
ಅದೇ ಕಾರಣಕ್ಕೆ ನಾವೆಲ್ಲ ಬಿಜೆಪಿಗೆ ಹೋಗಬೇಕಾಯಿತು ಎಂದು ನೆನಪು ಮಾಡಿಕೊಂಡರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ತಲಾ ಒಂದು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಗೆಲುವು ಕಂಡಿದ್ದವು.
2024 ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿರುವುದು ಎರಡೂ ಪಕ್ಷಗಳಿಗೆ ನೆರವಾಗದು. ಇದಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದು ಹೇಳಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯಗಳಿಸಿದ್ದಾರೆ.