Breaking News

ಪಶು ಆಸ್ಪತ್ರೆಗಳ ಮರು ಸ್ಥಳಾಂತರಕ್ಕೆ ಕೋರ್ಟ್ ಆದೇಶ

Spread the love

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿರುವ 28 ಪಶುವೈದ್ಯಕೀಯ ಕೇಂದ್ರಗಳ ಸ್ಥಳಾಂತರ ವಿಚಾರದಲ್ಲಿ ಮಧ್ಯ ಪ್ರವೇಶಿಸಿರುವ ಹೈಕೋರ್ಟ್, ಮೊದಲಿದ್ದ ಜಾಗದಲ್ಲೇ ಪಶುವೈದ್ಯಕೀಯ ಕೇಂದ್ರಗಳು ಕಾರ್ಯನಿರ್ವಹಿಸಬೇಕು ಹಾಗೂ ಕೇಂದ್ರಗಳಿಗೆ ವೈದ್ಯರು, ಸಿಬ್ಬಂದಿಯನ್ನು ಮರುನಿಯೋಜನೆ ಮಾಡಬೇಕು ಎಂದು ನಿರ್ದೇಶಿಸಿದೆ.

 

ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರಿಸಲು ಮುಂದಾಗಿದ್ದ ಸರ್ಕಾರ ಮತ್ತು ಬಿಬಿಎಂಪಿ ಕ್ರಮವನ್ನು ಪ್ರಶ್ನಿಸಿ ಅನಿಮಲ್ ರೈಟ್ಸ್ ಫಂಡ್ ಹಾಗೂ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ ಪಿಐಎಲ್‌ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಈ ನಿರ್ದೇಶನ ನೀಡಿದೆ.

ಪಶು ಆಸ್ಪತ್ರೆಗಳ ಮರು ಸ್ಥಳಾಂತರಕ್ಕೆ ಕೋರ್ಟ್ ಆದೇಶ

ನಗರದಲ್ಲಿ ಪ್ರತಿನಿತ್ಯ 600-700 ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ತುತ್ತಾಗುತ್ತವೆ. ಅವುಗಳಿಗೆ ಅಗತ್ಯ ಚಿಕಿತ್ಸೆ ನೀಡಬೇಕು. ಹೀಗಿರುವಾಗ ಪಶುವೈದ್ಯಕೀಯ ಆಸ್ಪತ್ರೆಗಳ ಸ್ಥಳಾಂತರಕ್ಕೆ ಮುಂದಾಗಿರುವ ನಿರ್ಧಾರದಿಂದ ಸ್ಥಳೀಯ ರೈತರು ತಮ್ಮ ಪಶುಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾಗುತ್ತದೆ. ಇದು ಸಾಮಾನ್ಯ ರೈತರನ್ನು ಸಂಕಷ್ಟಕ್ಕೆ ದೂಡುತ್ತದೆ ಎಂದು ಅರ್ಜಿದಾರರ ಪರ ವಕೀಲರು ಮಂಡಿಸಿದ ವಾದವನ್ನು ಪರಿಗಣಿಸಿದ ನ್ಯಾಯಪೀಠ ಈ ಆದೇಶ ಮಾಡಿದೆ.


Spread the love

About Laxminews 24x7

Check Also

ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0.

Spread the loveರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0. ಮಾರ್ಕೆಟ್ ಠಾಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ