Breaking News

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ, ಫೆಬ್ರವರಿ 24: ಲೋಕಸಭೆ ಚುನಾವಣೆ (Lok Sabha Election) ಹತ್ತಿರವಾಗುತ್ತಿದ್ದು, ಕಣಕ್ಕೆ ಇಳಿಸಲು ಕಾಂಗ್ರೆಸ್ (Congress)​ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ (Belagavi Lok Sabha Constituency) ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ (Chikkodi Lok Sabha Constituency) ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ ಎಂದರು.

ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್​​ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಹೇಳಿದರು.

ಖಂಡಿತವಾಗಿಯೂ ಅಭ್ಯರ್ಥಿಗಳ ನಾಮನಿರ್ದೇಶನವು ಜಾತಿ ಲೆಕ್ಕಾಚಾರಗಳನ್ನು ಆಧರಿಸಿರುತ್ತದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಸಮುದಾಯದಲ್ಲಿ ಮಾತ್ರವಲ್ಲದೆ ಇತರ ಸಮುದಾಯಗಳಲ್ಲಿಯೂ ಜನಪ್ರಿಯರಾಗಬೇಕು ಎಂದರು.

 

 


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ