Breaking News

ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ: ಬಿಜೆಪಿ

Spread the love

ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಆಮಿಷದ ಆರೋಪ ಕೇಳಿಬಂದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಬಿಜೆಪಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್ ಗಳ ಬ್ರದರ್ ರಿಂದ ಕುಕ್ಕರ್ ಹಂಚಲಾಗುತ್ತಿದೆ.

ದೇಶ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ ಎಂದು ಟೀಕಿಸಿದೆ

ಮತದಾರರಿಗೆ ಕುಕ್ಕರ್‌ ಆಮಿಷ: ಸಂಸದ ಡಿಕೆ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯ

.ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ . ಅಂದಹಾಗೆ ಕನಕಪುರದಲ್ಲಿ ನೀವು ಪ್ರತಿ ಬಾರಿ ಗೆಲ್ಲುವುದು ಗೂಂಡಾಗಿರಿಯಿಂದ ಎಂದು ತಿಳಿದಿತ್ತು. ಆದರೆ, ನಿಮ್ಮ ಗೂಂಡಾ ಮನಸ್ಸಿನೊಳಗೆ ವಾಮಮಾರ್ಗದ ಕುಕ್ಕರ್ ವಿಶಲ್ ಸಹ ಇದೆ ಎಂಬುದು ಜಗಜ್ಜಾಹೀರಾಗಿದೆ ಎಂದು ಕಿಡಿಕಾರಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ