ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ’ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಖಾನಾಪುರ ತಾಲೂಕಿನ ಕಣಕುಂಬಿ ಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ ‘ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು.
ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವದಿಲ್ಲ ಎಂದು ಪುನರುಚ್ಚರಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು