Breaking News
Home / ರಾಜಕೀಯ / ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ,

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ,

Spread the love

ಕಾರವಾರ, ಫೆ.26: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ( Kyasanur Forest Disease- KFD) 2ನೇ ಬಲಿಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ (Death). 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ.

20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಗೆ ಜ್ವರ ತೀವ್ರವಾದ ಹಿನ್ನೆಲೆ ಮೂರು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ 8:30ಕ್ಕೆ ಆಸ್ಪತ್ರೆಯಲ್ಲಿ ಸಾವು ಸಂಭವಿಸಿದೆ. ಸಿದ್ದಾಪೂರ ತಾಲೂಕಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದೆ. ಐದು ದಿನಗಳ ಹಿಂದಷ್ಟೇ ಸಿದ್ದಾಪುರ ತಾಲೂಕಿನ ಮಹಿಳೆ ಸಾವನಪ್ಪಿದ್ರು. ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಎರಡನೇ ಸಾವು ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ, ಹೆಚ್ಚಾದ ಆತಂಕ

ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನಲ್ಲಿ ನುಗ್ಗಿ ಗ್ರಾಮ ಪಂಚಾಯಿತಿಯ ಎರಡು ಹಳ್ಳಿಗಳು ಮಂಗನ ಕಾಯಿಲೆಯ ಕೇಂದ್ರ ಬಿಂದುವಾಗಿವೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಒಟ್ಟು 26 ಪ್ರಕರಣಗಳಿದ್ದು, ಈ ಪೈಕಿ 24 ಪ್ರಕರಣ ಕೊಪ್ಪ ತಾಲೂಕಿನಲ್ಲೆ ದಾಖಲಾಗಿವೆ. 79 ವರ್ಷ ವಯಸ್ಸಿನ ಒಬ್ಬರು ಮೃತಪಟ್ಟಿದ್ದು, ಉಳಿದವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ಯಾಸನೂರು ಕಾಡಿನ ಕಾಯಿಲೆ(ಕೆಎಫ್‌ಡಿ) ಎಂದು ಕರೆಯಲಾಗುತ್ತದೆ. ಈ ಕಾಯಿಲೆ ಹರಡಿದ ಮಂಗಗಳಿಗೆ ಕಚ್ಚಿದ ಉಣ್ಣೆಗಳು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗ ಹರಡುತ್ತಿದೆ. ಮಂಗಗಳು ಸಾಯುವುದು ಈ ರೋಗದ ಮುನ್ಸೂಚನೆ.

ಅರಣ್ಯಕ್ಕೆ ಹೋದ ಜನರಿಗೆ ಉಣ್ಣೆಗಳು ಕಚ್ಚಿದರೆ ಅವರಿಗೆ ಈ ರೋಗ ಕಾಣಿಸಿಕೊಳ್ಳುತ್ತದೆ. ಕೊಪ್ಪ ತಾಲ್ಲೂಕಿನಲ್ಲಿ ಹರಡಿರುವ ಮಂಗನ ಕಾಯಿಲೆಗೆ ಮರ ಕಡಿತವೇ ಕಾರಣ ಎಂಬುದನ್ನು ಸ್ಥಳೀಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಬೇರುಕೂಡಿಗೆ ಬಳಿ ಅರಣ್ಯ ಇಲಾಖೆ ಜಾಗದಲ್ಲಿದ್ದ ಅಕೇಷಿಯಾ ಮರಗಳನ್ನು ಕಡಿದು ಸಾಗಿಸುವ ಕೆಲಸ ನಡೆಯುತ್ತಿದೆ.


Spread the love

About Laxminews 24x7

Check Also

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

Spread the love ಪಣಜಿ: ಝೋಸ್ಕಾ ಆಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದಾಗಿ ಹೇಳಿ ಮಹಿಳೆಯೊಬ್ಬರು 2.71 ಲಕ್ಷ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ