Breaking News

ಲೋಕಸಭಾ ಚುನಾವಣೆ: ಬಿಜೆಪಿ ಬಗ್ಗೆ ಅಚ್ಚರಿಯ ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ

Spread the love

ಚಿಕ್ಕಮಗಳೂರು, ಫೆಬ್ರವರಿ 26: ಲೋಕಸಭೆ ಚುನಾವಣೆಗೆ (Lok Sabha Elections 2024) ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೇ, ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ (BJP) ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬರ್ಥದಲ್ಲಿ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ (Jiganehalli Mailaralingeshwara Karanika) ನುಡಿದಿದ್ದಾರೆ. ಜತೆಗೆ, ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ ನುಡಿಯನ್ನೂ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯಲ್ಲಿ ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಈ ಭಾಗದಲ್ಲಿ ಬಹಳ ಪ್ರಸಿದ್ಧಿ ಪಡೆದಿದೆ.

ಲೋಕಸಭಾ ಚುನಾವಣೆ: ಬಿಜೆಪಿ ಬಗ್ಗೆ ಅಚ್ಚರಿಯ ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ

‘ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್’ ಎಂದು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಈ ವರ್ಷ ಮಳೆ ಬೆಳೆ ಸಮೃದ್ಧವಾಗಿ ಆಗುತ್ತದೆ. ಮತ್ತೆ ಕಮಲ ಪಕ್ಷ ಅರಳುವುದು ನಿಶ್ಚಿತ ಎಂಬುದೇ ಇದರ ಅರ್ಥವೆಂದು ಭಕ್ತರು ವ್ಯಾಖ್ಯಾನಿಸಿದ್ದಾರೆ. ಕಾರ್ಣಿಕ ನುಡಿಗೆ ಸಾವಿರಾರು ಭಕ್ತರು ಸಾಕ್ಷಿಯಾದರು.

ಮಾರ್ಚ್ ಮೊದಲ ವಾರ ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗುವ ನಿರೀಕ್ಷೆ ಇದೆ. ಲೋಕಸಭೆ ಚುನಾವಣೆ ಸಿದ್ಧತೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ರಾಜ್ಯ ಘಟಕಗಳಿಂದ ಮಾಹಿತಿ ಕೇಳಿದೆ. ಏಪ್ರಿಲ್​ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಮೇ ಮೊದಲ ವಾರ ಅಥವಾ ಎರಡನೇ ವಾರ ಫಲಿತಾಂಶ ಪ್ರಕಟವಾಗಲಿದೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ