Breaking News

ರಸ್ತೆ ಅಪಘಾತ: ಯುವಕ‌ ಸಾವು, ಓರ್ವನಿಗೆ ಗಾಯ

Spread the love

ಸ್ಕಿ: ತಾಲೂಕಿನ ಮುದಬಾಳ ಕ್ರಾಸ್ ಸಮೀ‌ಪ ನಿಂತಿದ್ದ‌ ಟಿಪ್ಪರ್ ಗೆ‌ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಸ್ಥಳದಲ್ಲಿಯೇ ಸಾವನಪ್ಪಿದ್ದು ಮತ್ತೊಬ್ಬನಿಗೆ ಗಾಯಗಳಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಯುವಕ ಮಂಜುನಾಥ ಭೋವಿ (26) ಎಂದು ಗುರುತಿಸಲಾಗಿದೆ.

ಗಾಯಗೊಂಡ ಯುವಕ ಬಾಬು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ.

Maski: ರಸ್ತೆ ಅಪಘಾತ: ಯುವಕ‌ ಸಾವು, ಓರ್ವನಿಗೆ ಗಾಯ

ಮಂಜುನಾಥ ಮತ್ತು ಬಾಬು ಮಸ್ಕಿಯ ಭ್ರಮರಾಂಭ ಬಾರ್ ಆಯಂಡ್ ರೆಸ್ಟೋರೆಂಟ್ ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿಕೊಂಡು ಸ್ವ ಗ್ರಾಮ ಲಿಂಗಸುಗೂರು ತಾಲೂಕಿನ ಹೊನ್ನಾಳಿಗೆ ತೆರಳುತ್ತಿದ್ದರು. ಮಾರ್ಗ ಮದ್ಯ ಟೈಯರ್ ಪಂಕ್ಚರ್ ಆಗಿ ನಿಂತಿದ್ದ ಟಿಪ್ಪರ್ ಕಾಣದೇ ಬೈಕ್ ಸವಾರ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.

ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ