Breaking News
Home / ರಾಜಕೀಯ / ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್‌: ʼಕೈʼ ಅಭ್ಯರ್ಥಿಗೆ ಮತ

ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್‌: ʼಕೈʼ ಅಭ್ಯರ್ಥಿಗೆ ಮತ

Spread the love

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಪರ ಮತ ಹಾಕಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ ಸ್ವಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ.

“ಮತ ಚಲಾಯಿಸುವ ಮೊದಲು ಎಸ್.ಟಿ.ಸೋಮಶೇಖರ್‌ ಅವರು, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಆಗಲು ಪ್ರಯತ್ನಿಸಿದ್ದೆ.

Rajyasabha Election: ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್‌: ʼಕೈʼ ಅಭ್ಯರ್ಥಿಗೆ ಮತ

ಆದರೆ ಅವರು ಕಾಲಾವಕಾಶ ನೀಡಲಿಲ್ಲ. ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು.

ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಮತಹಾಕಿದ್ದಾರೆ ಎಂದು ವರದಿಯಾಗಿದೆ.

“ಆತ್ಮಸಾಕ್ಷಿಯಂತೆ ಮತ ಚಲಾಯಿಸಿ ಮತ ಪತ್ರವನ್ನು ಚುನಾವಣಾ ಏಜೆಂಟ್‌ ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ