Breaking News
Home / ಹುಬ್ಬಳ್ಳಿ / ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ

ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ

Spread the love

ಹುಬ್ಬಳ್ಳಿ, ಫೆಬ್ರವರಿ 27: ಪ್ರಧಾನಿ ನರೇಂದ್ರ ಮೋದಿ (Narendra Modi)ಸಮುದ್ರದ ಆಳದಲ್ಲಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಮಜುನ ಖರ್ಗೆ (Mallikarjun Kharge) ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ (Jagadish Shettar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ವಿಚಾರವಾಗಿ ಪ್ರತಿಕ್ರಿಯಿಸಿ, ಚುನಾವಣಾ ಫಲಿತಾಂಶದ ನಂತರ ಅದು ಗೊತ್ತಾಗಲಿದೆ. ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ತಿಳಿಯಲಿದೆ. ಫಲಿತಾಂಶ ಬರುವವರೆಗೂ ಏನೂ ಹೇಳಲಾಗದು. ಕುದುರೆ ವ್ಯಾಪಾರವೊ ಏನೋ ನನಗೆ ಗೊತ್ತಿಲ್ಲ ಎಂದರು.

ಕಳಸಾ ಬಂಡೂರಿ ಯೋಜನೆ ವಿಳಂಬ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, ಮನೋಹರ್ ಪರಿಕ್ಕರ್ ಗೋವಾ ಸಿಎಂ ಇದ್ದಾಗ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದೆ. ಮನೋಹರ್ ಪರಿಕ್ಕರ್ ಮನವೊಲಿಕೆ ಸಹ ಆಗಿತ್ತು. ಆದರೆ, ಆ ವೇಳೆ ಗೋವಾ ಕಾಂಗ್ರೆಸ್​​ನವರೇ ವಿರೋಧ ಮಾಡಿದ್ದರು. ಅಲ್ಲಿನ ಕಾಂಗ್ರೆಸ್ ನಾಯಕರಿಗೆ ತಿಳಿಹೇಳಿ ಅಂತ ಕರ್ನಾಟಕ ಕಾಂಗ್ರೆಸ್ ನಾಯಕರಿಗೂ ಹೇಳಿದ್ದೆ. ಕೆಲವರಿಂದಾಗಿ ಇದು ವಿಳಂಬವಾಗುತ್ತಿದೆ. ಅದನ್ನು ಸರಿ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ