Breaking News

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಇ.ಡಿ

Spread the love

ವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್‌ ನೀಡಿದೆ. 7 ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೆ ಸಮನ್ಸ್‌ ಜಾರಿ ಮಾಡಲಾಗಿದೆ.

ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಇ.ಡಿ

 

ಕೇಜ್ರಿವಾಲ್ ಅವರು ವಿಚಾರಣೆಗೆ ಹಾಜರಾಗದ ಕುರಿತು ಜಾರಿ ನಿರ್ದೇಶನಾಲಯ (ಇಡಿ)ವನ್ನು ನಗರ ನ್ಯಾಯಾಲಯವು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಮಾರ್ಚ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸೂಚಿಸಿದೆ.

ಪ್ರಕರಣವು ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವಾಗ ಹೊಸ ಸಮನ್ಸ್ ನೀಡುವುದು ತಪ್ಪು ಎಂದ ಕೇಜ್ರಿವಾಲ್ ಅವರ ವಾದವನ್ನು ತಿರಸ್ಕರಿಸಿದ ಜಾರಿ ನಿರ್ದೇಶನಾಲಯವು 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ