Breaking News

ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ

Spread the love

ಬೆಂಗಳೂರು, ಫೆ.27- ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಗುರಿಯಾಗಿಟ್ಟುಕೊಂಡು ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ನಗರ ಪೊಲೀಸರು ಬಂಧಿಸಿ 70 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಆರ್‍ ಪುರ: ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ದರೋಡೆಕೋರರು ಅವರ ಕೈಯಲಿದ್ದ ಮೊಬೈಲ್ ಪೋನ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ

ಆರೋಪಿಗಳಿಂದ 20 ಲಕ್ಷ ಬೆಲೆ ಬಾಳುವ ಒಟ್ಟು 68 ವಿವಿಧ ಕಂಪನಿಯ ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಮಹದೇವಪುರ ಪೊಲೀಸ್ ಠಾಣೆಯ ಒಟ್ಟು 9 ಮೊಬೈಲ್ ದರೋಡೆ ಪ್ರಕರಣಗಳು ಪತ್ತೆಯಾಗಿದ್ದು ಹೆಚ್ಚಿನ ತನಿಖೆ ಕೈಕೊಳ್ಳಲಾಗಿದೆ.

ಈ ಇಬ್ಬರು ಆರೋಪಿಗಳು ನಗರದ ಜನನಿಬಿಡ ಪ್ರದೇಶಗಳಾದ ಟಿನ್‍ಪ್ಯಾಕ್ಟರಿ, ಮಾರತ್ತಹಳ್ಳಿ, ಹೆಬ್ಬಾಳ, ಸಿಲ್ಕ್ ಬೋರ್ಡ್ ಮುಂತಾದ ಸ್ಥಳಗಳಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಒಂಟಿ ವ್ಯಕಿಗಳನ್ನು ಗುರಿಯಾಗಿಟ್ಟುಕೊಂಡು ಅವರು ಗಳಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ