Breaking News

ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

Spread the love

ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡರೂ ಸಹ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಸಂಖ್ಯಾಬಲದಲ್ಲಿ ಬಿಜೆಪಿ ಸ್ಥಾನಗಳನ್ನು ಹೊಂದಿದೆ. ರಾಜ್ಯಸಭೆಗೆ ಹಾಕುವ ಮತವನ್ನು ಪಕ್ಷದ ವೀಕ್ಷಕರಿಗೆ ತೋರಿಸಬೇಕಿರುವುದರಿಂದ ಅಡ್ಡಮತದಾನ ಮಾಡಿಸುವುದು ಬಹಳ ಕಷ್ಟ. ಆಡಳಿತಾರೂಢ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸುವುದು ಕಷ್ಟವಾಗಿರುವುದರಿಂದ ಕಾಂಗ್ರೆಸ್ ಅನಗತ್ಯವಾಗಿ ಕ್ರಮ ತೆಗೆದುಕೊಳ್ಳದೇ ಇರಲು ನಿರ್ಧರಿಸಿದೆ.

ಜೆಡಿಎಸ್ ಕೂಡ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ್ದು, ಬಿಜೆಪಿ ಅಭ್ಯರ್ಥಿ ಸುಲಭವಾಗಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆಗಳಿವೆ. ಪ್ರತಿಪಕ್ಷಗಳ ಸ್ಪರ್ಧೆ ಇಲ್ಲದೇ ಇರುವುದರಿಂದ ಚುನಾವಣೆ ನಡೆಯದೇ ಇರುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ