ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿದ್ದ 570 ಕ್ರಿಮಿನಲ್ ಪ್ರಕರಣ
ಬೆಂಗಳೂರು, ನ.13: ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧದ 570 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸಚಿವ ಸಂಪುಟದ ನಿರ್ಣಯ ಪ್ರಶ್ನಿಸಿ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಡಿ.9ರ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ
ಅರ್ಜಿದಾರರ ಪರ ವಾದಿಸಿದ ವಕೀಲ ಎಸ್.ಉಮಾಪತಿ ಅವರು, ಜನಪ್ರತಿನಿಧಿಗಳ ವಿರುದ್ಧ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದ 570 ಕ್ರಿಮಿನಲ್ ಪ್ರಕರಣಗಳನ್ನು ಸಚಿವ ಸಂಪುಟದ ತೀರ್ಮಾನದ ಮೇಲೆ ರಾಜ್ಯ ಸರಕಾರ ಹಿಂಪಡೆದಿದೆ.
ಸಿಆರ್ ಪಿ ಸೆಕ್ಷೆನ್ 321 ಪ್ರಕಾರ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಅಧಿಕಾರ ಸರಕಾರಕ್ಕಿಲ್ಲ. ಹೀಗಾಗಿ ಇದೊಂದು ಗಂಭೀರ ಲೋಪವಾಗಿದೆ.
ಇದು ಕಾನೂನಿನ ಮತ್ತು ಅಧಿಕಾರದ ಸ್ಪಷ್ಟ ದುರ್ಬಳಕೆಯಾಗಿದೆ. ಹೀಗಾಗಿ, ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಮಾಡಿರುವ ಸರಕಾರದ ಆದೇಶವನ್ನು ರದ್ದು ಪಡಿಸಬೇಕು ಎಂದು ಮನವಿ ಮಾಡಿದರು
