ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ- ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜ್ಯ ಬಿಜೆಪಿಯಿಂದ ಮನವಿ ಸಲ್ಲಿಸಲಾಗಿದೆ ಎಂದು ಹಿರಿಯ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತಿಳಿಸಿದರು.
Laxmi News 24×7